ರಾಜೀವ್ ಗಾಂಧಿ ಹಾಗೂ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪದ್ಮನಾಭ ಪೂಜಾರಿ ಮಾತನಾಡಿದರು. ಪ್ರಮುಖರಾದ ರಮಾನಾಥ್ ವಿಟ್ಲ, ದಿನಕರ ಆಳ್ವ, ಸುಧಾಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. 
ದಕ್ಷಿಣ ಕನ್ನಡ

ತಂತ್ರಜ್ಞಾನ, ಸಾಮಾಜಿಕ ಕ್ರಾಂತಿಯ ಹರಿಕಾರರು VITTAL

ನಿಶಾಂತ ಎನ್ ಬಿಲ್ಲಂಪದವು

ಪ್ರಮುಖ ಮುಖ್ಯಾಂಶಗಳು

  • ಪದ್ಮನಾಭ ಪೂಜಾರಿ ಸಣ್ಣಗುತ್ತು ಬಣ್ಣನೆ
  • ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮದಿನಾಚರಣೆ
ವಿಟ್ಲ: ತಂತ್ರಜ್ಞಾನ ಕ್ರಾಂತಿಯ ಮೂಲಕ ಭಾರತವನ್ನು ೨೧ನೇ ಶತಮಾನಕ್ಕೆ ಮುನ್ನಡೆಸಿದ ದೂರದೃಷ್ಟಿಯ ನಾಯಕ ರಾಜೀವ್ ಗಾಂಧಿ. ‘ಉಳುವವನೇ ಭೂಮಿಯ ಒಡೆಯ’ ಕಾಯ್ದೆಯ ಮೂಲಕ ಶೋಷಿತರಿಗೆ ಭೂಮಿಯ ಹಕ್ಕು ನೀಡಿ ಅವರ ಬದುಕಿಗೆ ಭದ್ರತೆ ಕಲ್ಪಿಸಿದ ಕ್ರಾಂತಿಕಾರಿ ಮುತ್ಸದ್ಧಿ ಡಿ.ದೇವರಾಜ ಅರಸು ಎಂದು ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಹೇಳಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ್ ವಿಟ್ಲ, ಬ್ಲಾಕ್ ಉಪಾಧ್ಯಕ್ಷ ದಿನಕರ ಆಳ್ವ, ಬ್ಲಾಕ್ ಕೋಶಾಧಿಕಾರಿ ಸುಧಾಕರ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಉಪಾಧ್ಯಕ್ಷ ಕೇಶವ ನಾಯ್ಕ, ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಎಂ.ಹಂಝ, ಬ್ಲಾಕ್ ಹಿಂದುಳಿದ ಘಟಕದ ಅಧ್ಯಕ್ಷ ಮೋಹನ್, ವಿಟ್ಲ ಸರ್ಕಾರಿ ಆಸ್ಪತ್ರೆ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ರಹಿಮಾನ್ ಕುರುಂಬಳ ಉಪಸ್ಥಿತರಿದ್ದರು.
"

ಮತದಾನದ ವಯಸ್ಸನ್ನು ೧೮ಕ್ಕೆ ಇಳಿಸಿ ಯುವಶಕ್ತಿಗೆ ಬಲ ತುಂಬಿದ ಹಾಗೂ ಪಂಚಾಯತ್ ರಾಜ್ ಮೂಲಕ ಗ್ರಾಮೀಣ ಭಾರತಕ್ಕೆ ಅಧಿಕಾರ ವಿಕೇಂದ್ರೀಕರಣ ಮಾಡಿದ ಕೀರ್ತಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹಾಗೂ ಶಿಕ್ಷಣದ ಹಕ್ಕು ಕೊಡಿಸಿ ಸಾಮಾಜಿಕ ನ್ಯಾಯದ ಹರಿಕಾರರಾದರು.

— ಎಂ.ಎಸ್.ಮುಹಮ್ಮದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ