Accident 
ದಕ್ಷಿಣ ಕನ್ನಡ

ಬೈಕ್ ಡಿಕ್ಕಿಯಾಗಿ ಮಹಿಳೆ ಸಾವು

ರಸ್ತೆ ದಾಟುತ್ತಿದ್ದ ವೇಳೆ ದುರ್ಘಟನೆ

ಕಡಬ: ಬಿಳಿನೆಲೆ ಗ್ರಾಮದ ನೆಟ್ಟಣದಲ್ಲಿರುವ ಸೇಂಟ್ ಮೇರೀಸ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನೆಟ್ಟಣದ ಮೆರೋಂಜಿ ಮನೆಯ ಅನ್ನಮ್ಮ(72) ಎಂಬುವರು ಮೃತಪಟ್ಟಿದ್ದಾರೆ.

ಅನ್ನಮ್ಮ ಶನಿವಾರ ಸಂಜೆ ಪತಿ ಪಿ.ಪಿ.ಕ್ಸೇವಿಯರ್ ಜತೆ ಚರ್ಚ್‌ಗೆ ಪ್ರಾರ್ಥನೆಗೆ ತೆರಳಿದ್ದರು. ಚರ್ಚ್ ಮುಂಭಾಗ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಅನ್ನಮ್ಮ ಅವರ ತಲೆ ಹಾಗೂ ಕೈಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.