ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ತಾಲೂಕುಮಟ್ಟದ ಮಹಿಳಾ ವಿಚಾರಗೋಷ್ಠಿಯ ಉದ್ಘಾಟನಾ ಸಮಾರಂಭದಲ್ಲಿ ತಹಸೀಲ್ದಾರ್ ಮಂಜುನಾಥ್ ಜಿ. ದೀಪ ಪ್ರಜ್ವಲಿಸಿದರು. ಪ್ರಮುಖರಾದ ಲಾವಣ್ಯ ಬಳ್ಳಾಲ್, ಆನಂದ ಸುವರ್ಣ ಮೊದಲಾದವರಿದ್ದರು. 
ದಕ್ಷಿಣ ಕನ್ನಡ

ಬದುಕು ಸಾಗಿಸಲು ಗ್ರಾಮಾಭಿವೃದ್ಧಿ ಯೋಜನೆ ಶಕ್ತಿ : ಲಾವಣ್ಯ ಬಳ್ಳಾಲ್

ಸೌಮ್ಯ ಆರ್
ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಮಾತನಾಡಿದರು. ಉದ್ಯಮಿ ಹರೀಂದ್ರ ಪೈ, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜ, ಯೋಜನಾಧಿಕಾರಿ ಅಮೃತಾ, ಬಾಳ್ತಿಲ ವಾತ್ಸಲ್ಯಮಯಿ ಮಹಿಳಾ ಸಂಶೋಧನಾ ಕೇಂದ್ರ ಅಧ್ಯಕ್ಷೆ ಶೈಲಜಾ ರಾಜೇಶ್ ಮುಖ್ಯ ಅತಿಥಿಯಾಗಿದ್ದರು. ಮಂಗಳೂರು ಇಂಚರಾ ೌಂಡೇಶನ್ ಆಡಳಿತಾಧಿಕಾರಿ ಮಲ್ಲಿಕಾ ಬಂಗೇರ, ಸದೃಢ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಆರೋಗ್ಯ ವಿಚಾರದ ಕುರಿತು ವಿಷಯ ಮಂಡಿಸಿದರು.