ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ದೇವಾಲಯದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಮಾಣಿಲ ಮೇಳದ ಯಕ್ಷಗಾನ ಪ್ರದರ್ಶನ ಸಂದರ್ಭ ನಡೆದ ಸಭೆಯನ್ನು ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ ಉದ್ಘಾಟಿಸಿದರು.
ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ದೇವಾಲಯದ ಶ್ರೀ ವ್ಯಾಸಮಂಟಪದಲ್ಲಿ ಕಾಸರಗೋಡು ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಕಲಾ ಸಂಘದ ಸಂಪೂರ್ಣ ಸಹಕಾರದೊಂದಿಗೆ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ವಾಣಿಲ ಶ್ರೀ ಮಹಾಲಕ್ಷ್ಮೀ ಯಕ್ಷಗಾನ ಕಲಾ ಮಂಡಳಿ ವತಿಯಿಂದ ಆಯೋಜಿಸಲಾದ ಯಕ್ಷಗಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಮಾಣಿಲ ಮೇಳದ ವ್ಯವಸ್ಥಾಪಕ ಡಾ.ಸತೀಶ ಪುಣಿಂಚತ್ತಾಯ ಅಧ್ಯಕ್ಷತೆ ವಹಿಸಿದ್ದರು.
ಕೆ.ಎನ್.ರಾಮಕಷ್ಣ ಹೊಳ್ಳ ಸ್ವಾಗತಿಸಿದರು. ಪತ್ರಕರ್ತ ವೀಜಿ ಕಾಸರಗೋಡು ನಿರೂಪಿಸಿದರು. ಕಿಶೋರ್ ಕುಮಾರ್ ವಂದಿಸಿದರು.