pocso case 
ದಕ್ಷಿಣ ಕನ್ನಡ

ಪೋಕ್ಸೋ ಅಪರಾಧಿಗೆ ಜೀವಾವಧಿ ಶಿಕ್ಷೆ

ಕಾಸರಗೋಡು: ಆರರ ಹರೆಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಲ್ಲಳ್ಳಿ ಗ್ರಾಮದ ಚೊಟ್ಟಪ್ಪನವರ ಕಲ್ಲಪ್ಪ ಅಲಿಯಾಸ್ ಕಲ್ಲೇಶ್ (46) ಎಂಬಾತನಿಗೆ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪಿ.ಎಂ. ಸುರೇಶ್ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಜತೆಗೆ ಹೆಚ್ಚುವರಿಯಾಗಿ 30 ವಷರ್ಗಳ ಕಠಿಣ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಅಪರಾಧಿ ಆರು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದ್ದಾರೆ.

2025 ಆಗಸ್ಟ್ 4 ಮತ್ತು 13ರಂದು ಕಾಸರಗೋಡು ಜಿಲ್ಲೆಯ ಕೊಡಕ್ಕಾಡ್ ಗ್ರಾಮದಲ್ಲಿ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ಕಲ್ಲೇಶ್ ಆರು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಚೀಮೇನಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಪೊಲೀಸ್ ಇನ್‌ಸ್ಪೆಕ್ಟರ್ ಟಿ.ಕೆ.ಮುಕುಂದನ್ ಪ್ರಾಥಮಿಕ ತನಿಖೆ ನಡೆಸಿದ್ದರು. ಬಳಿಕ ಎಸ್‌ಎಂಎಸ್ ಡಿವೈಎಸ್‌ಪಿ ವರ್ಗೀಸ್ ಅಲೆಕ್ಸಾಂಡರ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.