ಜಿಲ್ಲೆ

ಮನೆಯಲ್ಲಿ ಅನೈತಿಕ ಚಟುವಟಿಕೆ

Mangaluru - Nishantha Narayana

ಪುತ್ತೂರು: ಸಾಮೆತಡ್ಕದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಆಧರಿಸಿ ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿ, ಪುರುಷನನ್ನು ವಶಕ್ಕೆ ಪಡೆದಿದ್ದಾರೆ.

ಮನೆಯಲ್ಲಿದ್ದ ವಿಲ್ರೆಡ್ ಯಾನೆ ವಿಲಿ(೫೫) ಎಂಬಾತನನ್ನು ವಶಕ್ಕೆ ಪಡೆದು ಮಹಿಳಾ ಠಾಣೆಗೆ ಹಸ್ತಾಂತರಿಸಿದ್ದಾರೆ. ಸಾಮೆತಡ್ಕದ ಮನೆಯೊಂದರಲ್ಲಿ ಹುಡುಗ ಮತ್ತು ಹುಡುಗಿಗೆ ಕೊಠಡಿ ನೀಡಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಓರ್ವ ಮಹಿಳೆ ಹಾಗೂ ಪುರುಷ ಸ್ಥಳದಲ್ಲಿ ಪತ್ತೆಯಾಗಿದ್ದು, ದಾಳಿಯ ಮಾಹಿತಿ ತಿಳಿದು ಉಳಿದವರನ್ನು ಬೇರೆಡೆಗೆ ವರ್ಗಾಯಿಸಿದ್ದಾರೆನ್ನಲಾಗಿದೆ. ಘಟನೆ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.