ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಂಸತ್ತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಮಾತನಾಡುವಾಗ ವ್ಯಂಗ್ಯದಿಂದ ಮಾತನಾಡಿದ್ದಾರೆಂದು ಆರೋಪಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮದ್ದೂರು ತಾಲೂಕು ಘಟಕದ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಅಂದಾನಿ, ಮಾದೇಶ್, ಜೋಗಯ್ಯ, ಶಿವು, ಕೃಷ್ಣ, ದೊರೆಸ್ವಾಮಿ, ರಂಗಸ್ವಾಮಿ, ಸಿದ್ದರಾಜು ಇದ್ದರು. 
ಜಿಲ್ಲೆ

ಅಮಿತ್ ಷಾ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ

ಎಂ.ರವಿ

ಮದ್ದೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಂಸತ್ತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಮಾತನಾಡುವಾಗ ವ್ಯಂಗ್ಯದಿಂದ ಮಾತನಾಡಿದ್ದಾರೆಂದು ಆರೋಪಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮದ್ದೂರು ತಾಲೂಕು ಘಟಕದ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ಮಾಡಿದರು.

ತಾಲೂಕು ಕಚೇರಿಯ ಎದುರು ಜಮಾಯಿಸಿದ ಸಮಿತಿ ಪದಾಧಿಕಾರಿಗಳು ಅಮಿತ್ ಷಾ ವಿರುದ್ಧ ಘೋಷಣೆಗಳನ್ನು ಕೂಗಿ ಗುರುವಾರ ಆಕ್ರೋಶ ಹೊರ ಹಾಕಿ, ಅಮಿತ್ ಷಾ ಈ ಕೂಡಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಕೇಂದ್ರ ಸಚಿತ ಅಮಿತ್ ಷಾ ಅವರು ಸಂಸತ್ತಿನಲ್ಲಿ ಮಾತನಾಡುವಾಗ ಅಂಬೇಡ್ಕರ್ ಬಗ್ಗೆ ವ್ಯಂಗ್ಯದಿಂದ ಮಾತನಾಡಿದ್ದಾರೆ. ಅಂಬೇಡ್ಕರ್ ಅವರ ಹೆಸರು ಹೇಳುವ ಬದಲು ದೇವರ ಹೆಸರನ್ನು ಅಷ್ಟು ಸಲ ಪಠಣ ಮಾಡಿದ್ದರೆ ಸ್ವರ್ಗ ಪ್ರಾಪ್ತಿಯಾಗುತಿತ್ತು ಎಂದು ಹೇಳುವ ಮೂಲಕ ಅಂಬೇಡ್ಕರ್ ಹೆಸರಿಗೆ ಕಳಂಕ ತರುವ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ ಎಂದರು.

ಈ ಕೂಡಲೇ ರಾಷ್ಟ್ರಪತಿ ಮಧ್ಯಪ್ರವೇಶ ಮಾಡಿ ಅಮಿತ್ ಷಾ ಅವರು ಅಂಬೇಡ್ಕರ್ ಅವರ ಹೆಸರನ್ನು ವ್ಯಂಗ್ಯ ಮಾಡಿ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿ ದೇಶದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ನಂತರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಇದಕ್ಕೂ ಪಟ್ಟಣದ ಪ್ರವಾಸಿ ಮಂದಿರದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ಮಾಡಿದರು.

ಮುಖಂಡರಾದ ಮಾದೇಶ್, ಜೋಗಯ್ಯ, ಶಿವು, ಕೃಷ್ಣ, ದೊರೆಸ್ವಾಮಿ, ರಂಗಸ್ವಾಮಿ, ಸಿದ್ದರಾಜು, ಕುಮಾರ್, ರವಿ, ಪ್ರಕಾಶ, ರಾಜೇಶ, ಸಂಪತ್, ಸುಂದರೇಶ ಇದ್ದರು.