filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45; 
ಜಿಲ್ಲೆ

ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಲಲಾಟಾಕ್ಷ ಎಸ್

ಎಚ್.ಡಿ.ಕೋಟೆ: ಮುನಿರತ್ನ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಬುಧವಾರ ಪ್ರತಿಭಟನೆ ನಡೆಸಿದರು.


ತಾಲೂಕು ಆಡಳಿತ ಭವನದ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು ಶಾಸಕ ಮುನಿರತ್ನ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬೆಂಗಳೂರು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರಿಂದ 30 ಲಕ್ಷ ರೂ. ಕಮಿಷನ್ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ. ಜನಪ್ರತಿನಿಧಿಯೊಬ್ಬರು ಜಾತಿ ನಿಂದನೆ ಮಾಡಿರುವುದು ಸಾಕ್ಷಾೃಧಾರಗಳ ಸಮೇತ ಬಹಿರಂಗಗೊಂಡಿದೆ. ಒಕ್ಕಲಿಗ ಸಮುದಾಯದ ಮಹಿಳೆಯರನ್ನು ಅವಮಾನಿಸಿದ್ದಾರೆ. ಹಾಗಾಗಿ ಅವರನ್ನು ಶಾಸಕ ಸ್ಥಾನವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.


ಮುಖಂಡ ಬೆಟ್ಟಯ್ಯ ಕೋಟೆ ಮಾತನಾಡಿ, ಶಾಸಕರಾಗಿ ಯಾವ ರೀತಿ ವರ್ತಿಸಬೇಕು ಎಂಬುದೇ ತಿಳಿದಿಲ್ಲ. ಬಡವರನ್ನು ಸುಲಿಗೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ಮಾಡಿದ್ದು ಕಠಿಣ ಶಿಕ್ಷೆಯಾಗಬೇಕು ಎಂದರು.


ತಹಸೀಲ್ದಾರ್ ಮೂಲಕ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಿದರು. ಎಚ್.ಡಿ.ಕೋಟೆ ತಾಲೂಕು ಸಂಚಾಲಕ ಮಹೇಶ್ ಮಲಾರ, ಸರಗೂರು ತಾಲೂಕು ಸಂಚಾಲಕ ಡಿ.ಎಂ.ಶಿವಶಂಕರ್ ದೇವಲಾಪುರ, ಹೆಗ್ನೂರ್ ನಿಂಗರಾಜು, ಮಲಾರ ಮಹದೇವು, ಹೊಲ್ಲಹಳ್ಳಿ ಕಾಳಸ್ವಾಮಿ, ಲೋಕೇಶ್ ದೇವಲಾಪುರ, ಮುತ್ತು ಉಯಂಬಳ್ಳಿ, ಬಿಡುಗಲು ಶಿವಣ್ಣ, ಚಿಕ್ಕಯ್ಯ, ಗುಜ್ಜಯ್ಯ, ಬಸವರಾಜು, ಮಲ್ಲಿಕ್, ಪದ್ಮರಾಜು, ಶಂಬಮ್ಮ ಇದ್ದರು.