ಹುಬ್ಬಳ್ಳಿ: ಇಲ್ಲಿಯ ಶಿವಶಕ್ತಿ ಕಲಾ ಕೇಂದ್ರ ಹಾಗೂ ಪ್ರೇರಣಾ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ 44ನೇ ವರ್ಷಾಚರಣೆ ಅಂಗವಾಗಿ ನೃತ್ಯ ಸಂಭ್ರಮ ಕಾರ್ಯಕ್ರಮವನ್ನು ಆ. 26 ಹಾಗೂ 27ರಂದು ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ನಿರ್ದೇಶಕ ಆನಂದ ಕುಲಕರ್ಣಿ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ಇಂತಹ ಕಾರ್ಯಕ್ರಮ ನಡೆಸುತ್ತ ಬರಲಾಗಿದೆ. ಈ ಬಾರಿ ವಿಶೇಷವಾಗಿ ವರ್ಷಾಚರಣೆಯನ್ನು ಎರಡು ದಿನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಒಡಿಸ್ಸಿ, ಕುಚಿಪುಡಿ, ಜನಪದ, ಕಲಾತ್ಮಕ ಹಾಗೂ ವಿವಿಧ ರಾಜ್ಯಗಳ ಹಬ್ಬದ ನೃತ್ಯಗಳನ್ನು ಪ್ರದರ್ಶಿಸಲಾಗುವುದು ಎಂದರು.
ಆ. 26ರಂದು ಸಂಜೆ 5.30ಕ್ಕೆ ವಿಧಾನ ಪರಿಷತ್ ಸದಸ್ಯ ಪ್ರದಿಪ ಶೆಟ್ಟರ್ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಯುವ ಮುಖಂಡ ಸಂಕಲ್ಪ ಶೆಟ್ಟರ್, ಕನ್ನಡ ಮತ್ತು ಸಂಸತಿ ಇಲಾಖೆಯ ಉಪನಿರ್ದೇಶಕ ಕುಮಾರ ಬೆಕ್ಕೇರಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ ಇತರರು ಪಾಲ್ಗೊಳ್ಳುವರು.
ಆ. 27ರಂದು ಸಂಜೆ ನಡೆಯುವ ಕಾರ್ಯಕ್ರಮವನ್ನು ಮಾಜಿ ಸಿಎಂ, ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಉದ್ಘಾಟಿಸುವರು. ಅತಿಥಿಗಳಾಗಿ ಖ್ಯಾತ ನಾಟಕಕಾರ ಯಶವಂತ ಸರದೇಶಪಾಂಡೆ, ರಾಜ್ಯ ಕಾನೂನು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ. ಎಚ್.ವಿ. ಬೆಳಗಲಿ, ಸ್ವರ್ಣ ಗ್ರುಪ್ ಆಫ್ ಕಂಪನಿ ವ್ಯವಸ್ಥಾಪಕ ನಿದೇರ್ಶಕ ಡಾ. ವಿ.ಎಸ್.ವಿ. ಪ್ರಸಾದ, ರಮೇಶ ಮಹಾದೇವಪ್ಪನವರ ಇತರರು ಭಾಗವಹಿಸುವರು ಎಂದರು.