ನಂಜನಗೂಡು: ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಕತ್ವಾಡಿಪುರ, ಕನಕನಗರ, ಹಂಡುವಿನಹಳ್ಳಿ, ಬ್ಯಾಳಾರು, ದೇವರಸನಹಳ್ಳಿ, ದೇಬೂರು, ಕಲ್ಲಹಳ್ಳಿ, ದೇವರಸನಹಳ್ಳಿ ಹೊಸೂರು ಗ್ರಾಮಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ 1.20 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ನಂಜನಗೂಡು ತಾಲೂಕಿಗೆ 25 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ತಾಲೂಕಿನ ಎಲ್ಲ ಗ್ರಾಮಗಳಲ್ಲೂ ಹಂತ ಹಂತವಾಗಿ ಭೂಮಿಪೂಜೆ ನೆರವೇರಿಸುತ್ತಾ ಬಂದಿದ್ದೇವೆ. ಸರ್ಕಾರದಿಂದ ಮತ್ತಷ್ಟು ಅನುದಾನಗಳನ್ನ್ನು ತಾಲೂಕಿಗೆ ತಂದು ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದರು.
ಪ್ರತಿ ಗ್ರಾಮಕ್ಕು ತೆರಳಿದಾಗ ಸಮಸ್ಯೆಗಳ ಬಗ್ಗೆ ಜನರು ತಿಳಿಸುತ್ತಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಯಾವುದೇ ಸಮಸ್ಯೆ ಕಂಡುಬಂದಲ್ಲಿ ನೇರವಾಗಿ ನನ್ನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಿದರೆ ತಕ್ಷಣವೇ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮುಖಂಡರಾದ ಕುರಹಟ್ಟಿ ಮಹೇಶ್, ದೊರೆಸ್ವಾಮಿ ನಾಯಕ, ಗಾಯತ್ರಿ ಮೋಹನ್,ನಾಗರಾಜು, ಪಾಪಣ್ಣ, ಮಹದೇವ್ ಇತರರು ಇದ್ದರು.