ಜಿಲ್ಲೆ

ಜನರ ಸಮಸ್ಯೆ ಆಲಿಸಿದ ದರ್ಶನ್ ಧ್ರುವನಾರಾಯಣ

Mysuru - Desk - Naveen Kumar H P


ನಂಜನಗೂಡು : ಪ್ರವಾಹ ಪೀಡಿತ ಪ್ರದೇಶಗಳ ನಿವಾಸಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಸಲುವಾಗಿ ಬದಲಿ ನಿವೇಶನಗಳನ್ನು ನೀಡಿ ಮನೆ ನಿರ್ಮಿಸಿಕೊಡಲು ಕ್ರಮ ವಹಿಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.


ಶನಿವಾರ ನಂಜನಗೂಡು ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಬೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.


ಕಪಿಲಾ ನದಿಯಲ್ಲಿ ಪ್ರವಾಹ ಬಂದಾಗಲೆಲ್ಲ ಇದೇ ರೀತಿ ಪರಿಸ್ಥಿತಿ ಉದ್ಭವವಾಗುತ್ತದೆ. ಇದರಿಂದಾಗಿ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ತೊಂದರೆಯಾಗಲಿದೆ. ಆದ್ದರಿಂದ ಅವರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತಹಸೀಲ್ದಾರ್ ಅವರಿಗೆ ಜಾಗ ಗುರುತಿಸುವಂತೆ ಸೂಚನೆ ನೀಡಲಾಗಿದೆ ಎಂದರು.


ಸೀತಾರಾಮ ಕಲ್ಯಾಣ ಮಂಟಪದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ನಂತರ ಸಂತ್ರಸ್ತರ ಸಮಸ್ಯೆ ಆಲಿಸಿ ಸಮಾಲೋಚನೆ ನಡೆಸಿದರು.


ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಸಿ.ಎಂ.ಶಂಕರ್, ನಗರಸಭಾ ಸದಸ್ಯರಾದ ಪ್ರದೀಪ್, ಗಂಗಾಧರ್, ಶ್ರೀಕಂಠಸ್ವಾಮಿ, ಗಾಯತ್ರಿ, ಸೌಭಾಗ್ಯಾ, ಯೋಗೀಶ್, ಚಂದ್ರು, ಜಿಪಂ ಮಾಜಿ ಸದಸ್ಯ ಕೆ.ಮಾರುತಿ, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು ಸೇರಿದಂತೆ ಹಲವಾರು ಪ್ರಮುಖರು ಇದ್ದರು.