ಜಿಲ್ಲೆ

ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಅವಕಾಶ - ಶಾಸಕ ಅಶೋಕ್ ಕುಮಾರ್ ರೈ ಅನಿಸಿಕೆ - ದಸರಾ ಕ್ರೀಡಾಕೂಟಕ್ಕೆ ಚಾಲನೆ

Mangaluru - Nishantha Narayana

ಪುತ್ತೂರು: ದೇಶದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಕ್ರೀಡಾ ಮೂಲಸೌಕರ್ಯಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ. ದಸರಾ ಕ್ರೀಡಾಕೂಟದ ಮೂಲಕ ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಸಾಕಷ್ಟು ಅವಕಾಶ ಸಿಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ರೈ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‌ಕುಮಾರ್ ಭಂಡಾರಿ ಕ್ರೀಡಾ ಜ್ಯೋತಿ ಬೆಳಗಿದರು. ಕ್ರೀಡಾ ಸಾಧಕಿ ಕೀರ್ತಿ ಮತ್ತು ತಂಡದವರು ಕ್ರೀಡಾಜ್ಯೋತಿಯೊಂದಿಗೆ ವೇದಿಕೆಗೆ ಆಗಮಿಸಿದರು.

ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ್ ರಾವ್, ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ, ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆ ಸಂಚಾಲಕ ವಿಜಯ ಹಾರ್ವಿನ್, ಯುವಜನ ಒಕ್ಕೂಟ ಜಿಲ್ಲಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಅಧ್ಯಕ್ಷ ದಿನೇಶ್ ಸಾಲ್ಯಾನ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ.ವಿ., ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗದ ರಾಜೇಶ್ ಕೆ., ಯತೀಶ್ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಉಪಸ್ಥಿತರಿದ್ದರು.

ಯುವ ಸಬಲೀಕರಣ ಕ್ರೀಡಾ ಇಲಾಖೆ ನೋಡಲ್ ಅಧಿಕಾರಿ ಎಂ.ಮಾಮಚ್ಚನ್ ಸ್ವಾಗತಿಸಿದರು. ಯುವ ಸಬಲೀಕರಣ ಕ್ರೀಡಾ ಇಲಾಖೆ ಮೇಲ್ವಿಚಾರಕ ಶ್ರೀಕಾಂತ್ ಬಿರಾವು ವಂದಿಸಿದರು.