ದಾವಣಗೆರೆ : ನಗರದ ಶಾಮನೂರು ರಸ್ತೆಯ ಬಿಐಇಟಿ ಕಾಲೇಜಿನ ಬಳಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಕೆ. ಸುರೇಶ್ (41) ಮೃತಪಟ್ಟಿದ್ದಾರೆ. ಎದುರಿಗೆ ಬಂದ ಸ್ಕೂಟರ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡು ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿಯ ಕಾಂಪೌಂಡ್‌ಗೆ ಅಪ್ಪಳಿಸಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುರೇಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಷ್ಟು ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದರು. ಕಾರು ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಈ ಕುರಿತು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.