ಜಿಲ್ಲೆ

ಭ್ರಷ್ಟಾಚಾರ ತೊಲಗಿಸಲು ಪಾರದರ್ಶಕತೆ ಅವಶ್ಯಕ

ರಮೇಶ ಜಹಗೀರದಾರ್

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್ ಪ್ರಾಸ್ತಾವಿಕ ಮಾತನಾಡಿದರು.  ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಭ್ರಷ್ಟಾ ಚಾರ ನಿಯಂತ್ರಣದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್ ಮಾತನಾಡಿ, ಸರ್ಕಾರಿ ಅಧಿಕಾರಿ, ನೌಕರರು ಕಾನೂನಿನ ಚೌಕಟ್ಟು ಹಾಗೂ ಆತ್ಮಸಾಕ್ಷಿಯೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಕೆಲವೊಮ್ಮೆ ಕಾಯ್ದೆ, ಕಾನೂನಿನ ಆಚೆ ವಿವೇಚನಾ ಅಧಿಕಾರ ಚಲಾಯಿಸುವ ಸಂದರ್ಭ ಒದಗಿಬರುತ್ತದೆ. ಅಂತಹ ಸಂದರ್ಭದಲ್ಲಿ ಪ್ರತಿ ಕೆಲಸವನ್ನು ನ್ಯಾಯಬದ್ದವಾಗಿ, ಪಾರದರ್ಶಕತೆ, ಹೊಣೆಗಾರಿಕೆ ಸಮರ್ಪಕವಾಗಿ ಮಾಡಬೇಕೆಂದು ತಿಳಿಸಿದರು.

ಜನನ, ಮರಣ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಂಶವೃಕ್ಷ, ಇಂತಹ ಮೂಲ ಕೆಲಸಗಳನ್ನು ಯಾವುದೇ ವಿಳಂಬ ಮಾಡದೆ ತ್ವರಿತವಾಗಿ ನೀಡಬೇಕು. ಅಧಿಕಾರಿಗಳು ಅಂದಿನ ಕೆಲಸ ಅಂದೇ ನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ನೌಕರರಲ್ಲಿ ಕರ್ತವ್ಯ ಪ್ರಜ್ಞೆ, ಪ್ರಾಮಾಣಿಕತೆ ಮತ್ತು ಮಾನವೀಯತೆ ಇದ್ದಾಗ ಯಾವ ಸಮಸ್ಯೆ ಬರುವುದಿಲ್ಲ ಮತ್ತು ಬೇರೆಯವರಿಗೆ ತೊಂದರೆಯೂ ಆಗುವುದಿಲ್ಲ ಎಂದರು.

ಕೇಂದ್ರದಲ್ಲಿ ಸೆಂಟ್ರಲ್ ವಿಜಿಲೆನ್ಸ್ ಕಮಿಷನ್, ರಾಜ್ಯದಲ್ಲಿ ಲೋಕಾಯುಕ್ತ ಭ್ರಷ್ಟಾಚಾರದ ವಿರುದ್ಧ ಕಾರ್ಯ ನಿರ್ವಹಿಸುತ್ತಿವೆ. ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯಲ್ಲಿ ಭ್ರಷ್ಟಾಚಾರ ಮುಕ್ತ ಅರಿವು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ವಲಯಗಳ ಸೇವೆ ಕುರಿತು ಸಾರ್ವಜನಿಕರಿಗೆ ಭರವಸೆ ಮೂಡಬೇಕು. ಸರ್ಕಾರಿ ಕಚೇರಿಗೆ ಮುಕ್ತವಾಗಿ ಬಂದು ನಿಗದಿತ ಅವಧಿಯಲ್ಲಿ ಸೇವೆ ಪಡೆಯುವಂತೆ ಉತ್ತಮ ಸೇವೆ ನೀಡಬೇಕು. ಸಾರ್ವಜನಿಕರು ಸಹ ತಮ್ಮ ಸೇವೆ ಪಡೆಯಲು ಯಾವುದೇ ಲಂಚ, ಆಮಿಷ ನೀಡದೆ ಸೂಕ್ತ ಮಾಹಿತಿ ಹಾಗೂ ಸೇವೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸರ್ಕಾರಿ ಹಾಗೂ ಖಾಸಗಿ ವಲಯಗಳ ನೌಕರರು ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಹಣದ ಬೇಡಿಕೆ ಇಡದೆ ಪಾರದರ್ಶಕ ಸೇವೆ ನೀಡಬೇಕು. ಭ್ರಷ್ಟಾಚಾರ ನಡೆದ ಕುರಿತು ಮಾಹಿತಿ ದೊರೆತಲ್ಲಿ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಮಾಡಬೇಕು ಎಂದರು.

ಭ್ರಷ್ಟಾಚಾರ ನಿರಂತರ ಸೇವೆ ಹಾಗೂ ಪ್ರಾಮಾಣಿಕತೆಯನ್ನು ತಿಂದು ಹಾಕುತ್ತದೆ, ಸಮಾಜ ಕಲುಷಿತಗೊಂಡರೆ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಪ್ರತಿಯೊಬ್ಬರು ಪಾರದರ್ಶಕ ಮತ್ತು ಆತ್ಮಸಾಕ್ಷಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಲೋಕಾಯುಕ್ತ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಭ್ರಷ್ಟಾಚಾರ ನಿರ್ಮೂಲನಾ ಜಾಗೃತಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕ ಆಡಳಿತದಲ್ಲಿ ಭ್ರಷ್ಟಾಚಾರ ತೊಲಗಿಸಲು ಪಾರದರ್ಶಕತೆ, ನಿಸ್ವಾರ್ಥ ಸೇವೆ ಅವಶ್ಯಕ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.

ವಿಜಯವಾಣಿ ಸುದ್ದಿಜಾಲ ದಾವಣಗೆರೆ

ಭ್ರಷ್ಟಾಚಾರ ತೊಲಗಿಸಲು ಪಾರದರ್ಶಕತೆ ಅವಶ್ಯಕ

ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿಕೆ  ಜಾಗೃತಿ ಸಪ್ತಾಹ ಕಾರ್ಯಕ್ರಮ