ಜಿಲ್ಲೆ

ಕೋಗುಂಡಿ ಬಕ್ಕೇಶಪ್ಪ ಡಿಸಿಸಿ ಬ್ಯಾಂಕ್ ಅಧ್ಯಕ್ಷ

ರಮೇಶ ಜಹಗೀರದಾರ್

ದಾವಣಗೆರೆ : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಕೋಗುಂಡಿ ಬಕ್ಕೇಶಪ್ಪ, ಉಪಾಧ್ಯಕ್ಷರಾಗಿ ಡಿ. ಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ.
 ಬ್ಯಾಂಕಿನ ಸಭಾಂಗಣದಲ್ಲಿ ಬುಧವಾರ ಚುನಾವಣೆ ನಿಗದಿಯಾಗಿತ್ತು. 13 ಜನ ಸದಸ್ಯರು, ಅಪೆಕ್ಸ್ ಬ್ಯಾಂಕಿನ ಒಬ್ಬ ಪ್ರತಿನಿಧಿ, ಸಹಕಾರ ಇಲಾಖೆಯ ಉಪ ನಿಬಂಧಕರು ಸಭೆಯಲ್ಲಿ ಹಾಜರಿದ್ದರು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿದ್ದರಿಂದ ಆಯ್ಕೆ ಅವಿರೋಧವಾಗಿ ನಡೆಯಿತು.
 ರಿಟರ್ನಿಂಗ್ ಅಧಿಕಾರಿಯಾಗಿ ಜಿ. ನಜ್ಮಾ ಕರ್ತವ್ಯ ನಿರ್ವಹಿಸಿದರು.
 ...