ವಿಜಯವಾಣಿ ಸುದ್ದಿಜಾಲ ದಾವಣಗೆರೆ
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ರಾಜ್ಯಮಟ್ಟದ 10ನೇ ಸಮ್ಮೇಳನ ಜುಲೈ 8 ಮತ್ತು 9 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಸಂಘಟನೆಯ ರಾಜ್ಯ ಸಹ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ತಿಳಿಸಿದ್ದಾರೆ.
ಜಯನಗರದ ಮೂರನೇ ಹಂತದಲ್ಲಿರುವ ಚಾಮರಾಜು ಕಲ್ಯಾಣ ಮಂದಿರದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ. ಶನಿವಾರ ಸಂಜೆ 5 ಗಂಟೆಗೆ ಸಮ್ಮೇಳನವನ್ನು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಉದ್ಘಾಟಿಸುವರು ಎಂದು ಹೇಳಿದರು.
ರಾಜ್ಯದ ವಿವಿಧ ಭಾಗಗಳಿಂದ 1500 ಪ್ರತಿನಿಧಿಗಳು ಹಾಗೂ ವೀಕ್ಷಕರು ಭಾಗವಹಿಸಲಿದ್ದಾರೆ. ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳಿಂದ ಕೆ.ವಿಶ್ವನಾಥ್ ಬಿಲ್ಲವ, ಆರ್. ಆಂಜನೇಯ, ಪರಶುರಾಮ್, ಕೆ. ಶಶಿಶೇಖರ್, ಜಿ. ಶ್ರೀನಿವಾಸ್ ಮತ್ತು ತಾವು ಸೇರಿ 140 ಸದಸ್ಯರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.