ಜಿಲ್ಲೆ

94ನೇ ವಸಂತಕ್ಕೆ ಕಾಲಿಡಲಿರುವ ಶಾಮನೂರು

ರಮೇಶ ಜಹಗೀರದಾರ್

ದಾವಣಗೆರೆ : ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಭಾನುವಾರ 94ನೇ ವಸಂತಕ್ಕೆ ಕಾಲಿಡಲಿದ್ದಾರೆ.
 ಶಾಮನೂರು ಜನ್ಮದಿನದ ಅಂಗವಾಗಿ ಬೆಳಗ್ಗೆಯಿಂದ ಸಂಜೆಯ ವರೆಗೆ ಹಲವು ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಗೆ ನಗರದ ಐಎಂಎ ಹಾಲ್‌ನಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್‌ನಿಂದ ರಕ್ತದಾನ ಶಿಬಿರ ನಡೆಯಲಿದೆ. ಅಭಿಮಾನಿಗಳು ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು ವಿತರಿಸಲಿದ್ದಾರೆ. ಕ್ರಿಕೆಟ್ ಮತ್ತು ಬಾಸ್ಕೆಟ್‌ಬಾಲ್ ಸ್ಪರ್ಧೆಗಳ ವಿಜೇತರಿಗೆ ಬಹಿಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
 ನಗರದ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕುಟುಂಬದ ಸದಸ್ಯರೊಂದಿಗೆ ಸಂಭ್ರಮ ಹಂಚಿಕೊಳ್ಳಲಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಸಮಾಜದ ವಿವಿಧ ವರ್ಗಗಳ ಗಣ್ಯರು, ಸಂಘ ಸಂಸ್ಥೆಗಳ ಪ್ರಮುಖರು, ಅಭಿಮಾನಿಗಳು ಶುಭಾಶಯ ಕೋರಲಿದ್ದಾರೆ.