ಜಿಲ್ಲೆ

ಬಿಜೆಪಿ ಸಭೆಯಲ್ಲಿ ಒಗ್ಗಟ್ಟಿನ ಮಂತ್ರ

ರಮೇಶ ಜಹಗೀರದಾರ್

ದಾವಣಗೆರೆ : ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ ದಾಸ್ ಅಗರವಾಲ್ ಶನಿವಾರ ನಗರಕ್ಕೆ ಭೇಟಿ ನೀಡಿ ಜಿಲ್ಲೆಯ ಬಿಜೆಪಿ ನಾಯಕರ ಜತೆ ಸಭೆ ನಡೆಸಿದರು.

ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ್, ಮಾಜಿ ಮೇಯರ್ ಬಿ.ಜಿ. ಅಜಯ ಕುಮಾರ್, ಲೋಕಿಕೆರೆ ನಾಗರಾಜ, ಮಾಡಾಳು ಮಲ್ಲಿಕಾರ್ಜುನ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರಾಜಶೇಖರ ಸೇರಿ ಅನೇಕ ಮುಖಂಡರು ಭಾಗವಹಿಸಿದ್ದರು.

ರಾಧಾ ಮೋಹನದಾಸ್ ಅವರು ಮುಖ್ಯವಾಗಿ ಪೇಜ್ ಪ್ರಮುಖರ ಬಗ್ಗೆ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಮುಖಂಡರಿಗೆ ಸೂಚನೆ ನೀಡಿದರು.

ಇತ್ತೀಚೆಗಷ್ಟೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ದಾವಣಗೆರೆಗೆ ಬಂದು ಇಲ್ಲಿನ ಭಿನ್ನಮತವನ್ನು ಶಮನ ಮಾಡಿದ್ದರು. ಅಂದಿನ ಸಭೆಯಲ್ಲೂ ರಾಧಾ ಮೋಹನ ದಾಸ್ ಅಗರವಾಲ್ ಇದ್ದರು.