ಜಿಲ್ಲೆ

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ

ರಮೇಶ ಜಹಗೀರದಾರ್

ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.
 ನಗರದ ಬಿ.ಎನ್. ಲೇಔಟ್‌ನಲ್ಲಿನ ಮೌಲಾನಾ ಆಜಾದ್ ಭವನದಿಂದ ಬೂದಾಳ್‌ರಸ್ತೆವರೆಗಿನ ಸಿಸಿ ರಸ್ತೆ ಕಾಮಗಾರಿಗೆ ಶನಿವಾರ ಚಾಲನೆ ನೀಡಿ, ಮಾತನಾಡಿದರು.
 ಹಿಂದೆಯೂ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನೇಕ ಕಾಮಗಾರಿಗಳು ನಡೆದಿವೆ. ದಿನೇದಿನೆ ಹೊಸ ಲೇಔಟ್‌ಗಳ ಹೆಚ್ಚಳದಿಂದ ಅಭಿವೃದ್ಧಿ ಕೆಲಸ ಮಾಡಬೇಕಾಗಿದ್ದು, ವಿವಿಧ ಇಲಾಖೆಗಳ ಅನುದಾನದಿಂದ ಸಮಗ್ರ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದರು.
 ಮಹಾಪೌರ ವಿನಾಯಕ ಪೈಲ್ವಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯಕುಮಾರ್, ಸದಸ್ಯ ಜಿ.ಡಿ. ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಪಂಚಾಯತ್ ರಾಜ್ ವಿಭಾಗದ ಸಹಾಯಕ ಕಾರ‌್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ, ಸಹಾಯಕ ಇಂಜಿನಿಯರ್ ವೆಂಕಟೇಶ್, ಗುತ್ತಿಗೆದಾರ ಕಿರಣ್ ಅಂದನೂರು ಮತ್ತು ಮುಖಂಡರು ಇದ್ದರು.