ದಾವಣಗೆರೆ : ದೇಶದ ಸಂವಿಧಾನ ಬದಲಿಸುವ ಅಜೆಂಡಾ ಹೊಂದಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಹೇಳಿದರು.
ಕಾಂಗ್ರೆಸ್ ಸಾಮಾಜಿಕ ನ್ಯಾಯ ಸಮಿತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ರಾಷ್ಟ್ರದಲ್ಲಿ ಕೋಮುವಾದಿ ನೀತಿ ಅನುಸರಿಸುವ ಮೂಲಕ ಬಿಜೆಪಿ ಸರ್ವಾಧಿಕಾರಿ ಧೋರಣೆಯ ಆಡಳಿತ ನಡೆಸುತ್ತಿದ್ದು, ಇಂತಹ ಸರ್ಕಾರವನ್ನು ಬದಲಿಸುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿಸಿದರು.
ಜಾತ್ಯತೀತ ನಿಲುವು ಹೊಂದುವ ಮೂಲಕ ಸಾಮಾಜಿಕ ನ್ಯಾಯದಡಿ ಅಧಿಕಾರ ನೀಡುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಸಾಮಾಜಿಕ ನ್ಯಾಯ ಸಮಿತಿಯ ಜಿಲ್ಲಾಧ್ಯಕ್ಷ ಎಸ್. ಪರಮೇಶ್ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನಹಿತ ಕಾಪಾಡಿದೆ. ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಎಸ್.ಎಸ್. ಕೇರ್ ಟ್ರಸ್ಟ್‌ನಿಂದ ಬಡ ಮಕ್ಕಳಿಗೆ ಶಿಷ್ಯವೇತನ , ಉಚಿತ ಆರೋಗ್ಯ ಶಿಬಿರ ನಡೆಸಿ ಬಡ ಜನರಿಗೆ ಅನುಕೂಲ ಕಲ್ಪಿಸಿದ್ದು, ಹೆಚ್ಚಿನ ಮತಗಳಿಂದ ಚುನಾಯಿಸಬೇಕು ಎಂದರು
ವಕೀಲರಾದ ಬಿ.ಎಂ. ಹನುಮಂತಪ್ಪ, ಕಂಚಿಕೇರಿ ಮಂಜಪ್ಪ, ಡೋಲಿ ಚಂದ್ರು, ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ಶುಭಮಂಗಳಾ, ಮಹಿಳಾ ಕಾಂಗ್ರೆಸ್‌ನ ಮಂಗಳಮ್ಮ, ಮಹ್ಮದ್ ಇಸ್ಮಾಯಿಲ್ ಮಾತನಾಡಿದರು.
ಸಾಮಾಜಿಕ ನ್ಯಾಯ ಸಮಿತಿಯ ಪ್ರಧಾನ ಕಾರ‌್ಯದರ್ಶಿ ಕವಿತಾ ಚಂದ್ರಶೇಖರ್, ಅರುಣಕುಮಾರ್, ಮಹಮ್ಮದ್ ಇಮ್ತಿಯಾಜ್, ಜಿಲ್ಲಾ ಉಪಾಧ್ಯಕ್ಷ ತಿಪ್ಪೇಶಪ್ಪ, ಮಂಜಪ್ಪ ಇತರರು ಇದ್ದರು.