ಜಿಲ್ಲೆ

ಇನ್ನೂ ಮೂವರ ಬಂಧನ, ಚಿನ್ನ, ಬೆಳ್ಳಿ ವಶ

ರಮೇಶ ಜಹಗೀರದಾರ್

ದಾವಣಗೆರೆ : ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ ಒಂಟಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಮನೆ ದರೋಡೆ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಇನ್ನೂ ಮೂವರು ಆರೋಪಿಗಳನ್ನು ಬಂಧಿಸಿದ್ದು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಾನು ಹಾಗೂ 5 ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ.  ತಾಲೂಕಿನ ಅತ್ತಿಗೆರೆ ಗ್ರಾಮದ ಎನ್. ಮಂಜಪ್ಪ, ತುಮಕೂರು ಜಿಲ್ಲೆ ಹೊಸೂರು ಗ್ರಾಮದ ಚಂದ್ರಪ್ಪ ಮತ್ತು ಬೆಂಗಳೂರಿನ ಅರ್ಕಾವತಿ ಬಡಾವಣೆ ಬಾಬುಸಾ ಪಾಳ್ಯದ ಕೆ. ಸತೀಶ ಬಂಧಿತರು. ಪ್ರಕರಣದ ಪ್ರಮುಖ ಆರೋಪಿ ನವೀನ್ ಕುಮಾರನನ್ನು ಪೊಲೀಸರು ಈ ಮೊದಲೇ ಬಂಧಿಸಿದ್ದರು.