ಜಿಲ್ಲೆ

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ

ರಮೇಶ ಜಹಗೀರದಾರ್

ದಾವಣಗೆರೆ  : ಪತ್ನಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಗುರುವಾರ ತನ್ನ ಇಬ್ಬರು ಮಕ್ಕಳನ್ನು  ಕೊಂದು, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಇಲ್ಲಿನ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ ಉದಯ ಕುಮಾರ್  (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅದಕ್ಕೂ ಮೊದಲು ಪುತ್ರಿ ಸಿಂಧುಶ್ರೀ (6) ಹಾಗೂ ಪುತ್ರ ಶ್ರೀಜಯ್ (3) ಅವರ ಕತ್ತು ಹಿಸುಕಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.  ರಾಣೇಬೆನ್ನೂರು ತಾಲೂಕಿನ ಚಳಗೇರಿಯ ಹೇಮಾ ಹಾಗೂ ದಾವಣಗೆರೆಯ ಉದಯ ಕುಮಾರ್ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಹೇಮಾ ಹೃದಯಾಘಾತದಿಂದ ಸೆಪ್ಟೆಂಬರ್‌ನಲ್ಲಿ ಮೃತಪಟ್ಟಿದ್ದರು. ಇದರಿಂದ ಉದಯ ಕುಮಾರ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.