ಜಿಲ್ಲೆ

ಕಿರುಕುಳದಿಂದ ಮನನೊಂದು ಆತ್ಮಹತ್ಯೆ

ರಮೇಶ ಜಹಗೀರದಾರ್

ದಾವಣಗೆರೆ : ತಾಲೂಕಿನ ಕುಕ್ಕವಾಡ ಗ್ರಾಮದಲ್ಲಿ ಶನಿವಾರ, ಮೈಕ್ರೋ ಫೈನಾನ್ಸ್ ಕಂಪನಿಯ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಮನನೊಂದು ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಜಿ.ಎಂ. ಬಸವರಾಜ್ (56) ಆತ್ಮಹತ್ಯೆ ಮಾಡಿಕೊಂಡವರು. ಮೈಕ್ರೋ ಫೈನಾನ್ಸ್ ಕಂಪನಿಯೊಂದರಲ್ಲಿ 4 ಲಕ್ಷ ರೂ. ಸಾಲ ಮಾಡಿದ್ದರು. ಕಂಪನಿ ಸಿಬ್ಬಂದಿ ಸಾಲ ಮರಳಿಸಿಲ್ಲ ಎಂದು ರಸ್ತೆಯಲ್ಲಿ ನಿಲ್ಲಿಸಿ ಕಿರುಕುಳ ನೀಡಿದ್ದರು. ಅಲ್ಲದೇ ಮನೆಗೆ ನುಗ್ಗಿ ಗಲಾಟೆ ಮಾಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.