ದಾವಣಗೆರೆ : ತಾಲೂಕಿನ ಗ್ರಾಮವೊಂದರಲ್ಲಿ ಆಟವಾಡುತ್ತಿದ್ದ ಏಳೂವರೆ ವರ್ಷದ ಬಾಲಕಿಯ ಮೇಲೆ ಇಬ್ಬರು ಬಾಲಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. 15 ವರ್ಷದ ಒಬ್ಬ ಬಾಲಕ, 17 ವರ್ಷದ ಇನ್ನೊಬ್ಬ ಬಾಲಕ ಸೇರಿ ಭಾನುವಾರ ಸಂಜೆ ಪೇರಲಹಣ್ಣು ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಈ ಕೃತ್ಯ ಎಸಗಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.