ಜಿಲ್ಲೆ

ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ರಮೇಶ ಜಹಗೀರದಾರ್

ದಾವಣಗೆರೆ  : ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ಎಸಗಿದ ಅಪರಾಧಿ ಯಮುನೇಶ ಎಂಬಾತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಆದೇಶಿಸಿದೆ.  15 ವರ್ಷದ ಬಾಲಕಿಯನ್ನು ಮದುವೆಯಾಗಿ ಅತ್ಯಾಚಾರ ಎಸಗಿದ್ದಕ್ಕೆ ಸಂಬಂಧಿಸಿದಂತೆ 2022ರ ಫೆ. 10ರಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಮಂಗಳವಾರ ಆದೇಶ ಪ್ರಕಟಿಸಿದರು.  ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಆರ್. ಚೌಬೆ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಕೀಲೆ ಸುನಂದಾ ಮಡಿವಾಳರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.