ಜಿಲ್ಲೆ

ಡಿಜಿಟಲ್ ಅರೆಸ್ಟ್, ಮತ್ತೊಬ್ಬ ಆರೋಪಿ ಬಂಧನ

ರಮೇಶ ಜಹಗೀರದಾರ್

ದಾವಣಗೆರೆ : ಡಿಜಿಟಲ್ ಅರೆಸ್ಟ್ ಪ್ರಕರಣ ಸಂಬಂಧ ಇಲ್ಲಿನ ಸಿಇಎನ್ ಅಪರಾಧ ಠಾಣೆಯ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.  ಹಾಸನ ಜಿಲ್ಲೆ ಬೇಲೂರು ತಾಲೂಕು ಹೊಸಳ್ಳಿ ನಿವಾಸಿ, ಬೇಕರಿಯಲ್ಲಿ ಕೆಲಸ ಮಾಡುವ ಮಧು ಕುಮಾರ್ ಬಂಧಿತ ಆರೋಪಿ. ಈತನಿಂದ ಪೊಲೀಸರಿಗೆ 16 ಬ್ಯಾಂಕ್ ಖಾತೆಗಳ ಮಾಹಿತಿ ದೊರೆತಿದೆ.  ಮಧು ಕುಮಾರ್, ಎ1 ಆರೋಪಿ ಆಶ್ರಫ್‌ನೊಂದಿಗೆ ಸೇರಿಕೊಂಡು ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಆಶ್ರಫ್‌ನ ಪತ್ತೆಗಾಗಿ ಬಲೆ ಬೀಸಲಾಗಿದೆ, ತನಿಖೆ ಮುಂದುವರಿದಿದೆ.  ಡಿಜಿಟಲ್ ಅರೆಸ್ಟ್ ಪ್ರಕರಣದಲ್ಲಿ ನಗರದ ಶಿಕ್ಷಕಿಯೊಬ್ಬರಿಗೆ ಇತ್ತೀಚೆಗೆ 22.40 ಲಕ್ಷ ರೂ.ಗಳನ್ನು ವಂಚಿಸಲಾಗಿತ್ತು. ಈ ಸಂಬಂಧ ಪೊಲೀಸರು ಈಗಾಗಲೇ ಅರುಣ್ ಕುಮಾರ್‌ನನ್ನು ಬಂಧಿಸಿದ್ದರು.  ...