ಜಿಲ್ಲೆ

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎ.ಆರ್. ಉಜ್ಜನಪ್ಪ ನಿಧನ

ರಮೇಶ ಜಹಗೀರದಾರ್

ದಾವಣಗೆರೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಹಾಲಿ ಗೌರವಾಧ್ಯಕ್ಷ ಎ.ಆರ್. ಉಜ್ಜನಪ್ಪ (71) ಶುಕ್ರವಾರ ಹೃದಯಾಘಾತದಿಂದ ನಿಧನರಾದರು.
 ಬೆಳಗ್ಗೆ ಎಂದಿನಂತೆ ವಾಯು ವಿಹಾರಕ್ಕೆ ತೆರಳಿದ್ದ ವೇಳೆ ಅವರಿಗೆ ಹೃದಯಾಘಾತವಾಯಿತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
 ಅವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಪಾರ್ಥಿವ ಶರೀರವನ್ನು ನಗರದ ಆಂಜನೇಯ ಬಡಾವಣೆಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಕನ್ನಡ ಭವನದಲ್ಲಿ ಕನ್ನಡ ಶಾಲು ಹೊದಿಸಿ ಅಂತಿಮ ನಮನ ಸಲ್ಲಿಸಲಾಯಿತು. ತಾಲೂಕಿನ ಬೋರಗೊಂಡನಹಳ್ಳಿ ಗ್ರಾಮದ ಜಮೀನಿನಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಿತು.
 ಉಜ್ಜನಪ್ಪ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ, ಸರ್ಕಾರಿ ನಿವೃತ್ತ ನೌಕರರ ಸಂಘದ ಹಾಲಿ ಅಧ್ಯಕ್ಷರಾಗಿದ್ದರು. ಲಯನ್ಸ್ ಸಂಸ್ಥೆಯ ಗವರ್ನರ್ ಆಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದರು.