ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಎಳ್ಳು ಅಮಾವಾಸ್ಯೆಯ ಕಡೇ ಕಾರ್ತಿಕೋತ್ಸವದ ಅಂಗವಾಗಿ ಸಹಸ್ರ ದೀಪೋತ್ಸವ ಕಾರ್ಯಕ್ರಮ ಸೋಮವಾರ ನಡೆಯಲಿದೆ. ಬೆಳಗ್ಗೆ 6 ಗಂಟೆಯಿಂದ ಸ್ವಾಮಿಗೆ ರುದ್ರಾಭಿಷೇಕ, ಅಷ್ಟೋತ್ತರ, ಮಹಾ ಮಂಗಳಾರತಿ ಹಾಗೂ ಸಂಜೆ 6 ಗಂಟೆಗೆ ಮರವಂಜಿ ಗ್ರಾಮದಲ್ಲಿ ವೀರಗಾಸೆ ಕುಣಿತದೊಂದಿಗೆ ಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ಹಾಗೂ ಸಹಸ್ರ ದೀಪೋತ್ಸವ ಮತ್ತು ಮಠದಲ್ಲಿ ಪ್ರಸಾದ ವಿನಿಯೋಗವಿರುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಮರವಂಜಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.