ದಾವಣಗೆರೆ : ಹರಿಹರ ತಾಲೂಕು ಸಾಲಕಟ್ಟೆ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿದರು. ಆಯುಷ್‌ಮಾನ್ ಭಾರತ್ ಕಾರ್ಡ್‌ಗಾಗಿ ನೋಂದಣಿ ಮಾಡಿಸಿದರು. ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಔಷಧ ಸಿಂಪರಣೆ ಕುರಿತು ಡ್ರೋನ್ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು.
ಹರಿಹರ ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ನಾರಾಯಣಸ್ವಾಮಿ, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಮುಖಂಡರಾದ ಜಗದೀಶ್, ಚಂದ್ರಶೇಖರ ಪೂಜಾರ್, ಶ್ರೀನಿವಾಸ ದಾಸಕರಿಯಪ್ಪ ಇದ್ದರು.