ಜಿಲ್ಲೆ

ಖಾಸಗಿ ಶಿಕ್ಷಣ ಸಂಸ್ಥೆಗಳ ಹೆಚ್ಚುವರಿ ಶುಲ್ಕಕ್ಕೆ ಕಡಿವಾಣ ಹಾಕಿ

ರಮೇಶ ಜಹಗೀರದಾರ್

ದಾವಣಗೆರೆ: ರಾಜ್ಯದಲ್ಲಿ ಖಾಸಗಿ ಶಿಕ್ಷಣದ ಸಂಸ್ಥೆಗಳು ವಿದ್ಯಾರ್ಥಿಗಳಿಂದ ವಸೂಲಿ ಮಾಡುತ್ತಿರುವ ಹೆಚ್ಚುವರಿ ಶಿಕ್ಷಣ ಶುಲ್ಕಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ  ಕೆ.ಎಸ್. ಶಿವಕುಮಾರಪ್ಪ ಒತ್ತಾಯಿಸಿದರು.
 ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅವ್ಯವಸ್ಥೆಯಿಂದ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದಾಖಲಿಸುತ್ತಿದ್ದಾರೆ. ಇದನ್ನೇ ದುರುಪಯೋಗಪಡಿಸಿಕೊಂಡು ವರ್ಷದಿಂದ ವರ್ಷಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ದುಪ್ಪಟ್ಟು ಶುಲ್ಕ ವಸೂಲಿ ಮಾಡುತ್ತಿವೆ. ಇದರಿಂದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದರು.
 ಆದ್ದರಿಂದ ಸರ್ಕಾರ ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರಿ ಶಾಲಾ ಕಾಲೇಜುಗಳನ್ನು ಉಳಿಸುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
 ಸುದ್ದಿಗೋಷ್ಠಿಯಲ್ಲಿ ರವೀಂದ್ರ, ಸುರೇಶ ಸಿಡ್ಲಪ್ಪ, ಧರ್ಮಾನಾಯ್ಕ, ಹಾಲಸ್ವಾಮಿ, ಚನ್ನಬಸಪ್ಪ ಇದ್ದರು.