ದಾವಣಗೆರೆ : ಕಲ್ಯಾಣ ಕರ್ನಾಟಕ ಯೋಜನೆಯ ಅನುದಾನದಲ್ಲಿ ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ಮತ್ತು ಜಗಳೂರು ಕ್ಷೇತ್ರದ 7 ಗ್ರಾಮ ಪಂಚಾಯಿತಿಗಳಿಗೆ ಹೆಚ್ಚು ಮೊತ್ತ ಬಿಡುಗಡೆ ಮಾಡಬೇಕು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು ಅಭಿವೃದ್ಧಿ ದೃಷ್ಟಿಯಿಂದ ಹೆಚ್ಚಿನ ಹಣ ಒದಗಿಸುವಂತೆ ಮನವಿ ಮಾಡಿದರು.
ತೃತೀಯ ಲಿಂಗಿಗಳನ್ನು ಶಕ್ತಿ ಯೋಜನೆಯಡಿ ಸೇರ್ಪಡೆ ಮಾಡಿ ಅವರೂ ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ವ್ಯವಸ್ಥೆ ಮಾಡಬೇಕು. ಅವರಿಗೆ ಬಾಡಿಗೆ ಮನೆಗಳು ದೊರೆಯದ ಕಾರಣ ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು