ದಾವಣಗೆರೆ : ಮೈಸೂರು ಜಿಲ್ಲೆ ಶ್ರೀಕ್ಷೇತ್ರ ಸುತ್ತೂರಿನ ಜಗದ್ಗುರು ಶ್ರೀ ವೀರ ಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅವರು ನಿರ್ಮಿಸಿರುವ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹವನ್ನು ಶುಕ್ರವಾರ ಲೋಕಾರ್ಪಣೆ ಗೊಳಿಸಲಾಯಿತು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅತಿಥಿ ಗೃಹವನ್ನು ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಮಠದ ಆಡಳಿತ ಅಧಿಕಾರಿ ಸಿ.ಜಿ.ಬೆಟಸೂರಮಠ, ಬೆಂಗಳೂರು ಮಾಜಿ ಮೆಯರ್ ಪುಟ್ಟರಾಜು, ಉದ್ಯಮಿ ಇಂದೂಧರ್, ವರುಣ ಮಹೇಶ್, ಸುನಂದಾ ಗಿರೀಶ್ ಇದ್ದರು.