ಜಿಲ್ಲೆ

ಪ್ರವಾಹ ಸಂತ್ರಸ್ತರಿಗೆ ಸೂರು ಕಲ್ಪಿಸಲು ಆಗ್ರಹ

ರಮೇಶ ಜಹಗೀರದಾರ್

ದಾವಣಗೆರೆ : ಪ್ರವಾಹದಲ್ಲಿ ಸಂತ್ರಸ್ತರಾಗಿ ಮನೆ ಕಳೆದುಕೊಂಡವರಿಗೆ ಸರ್ಕಾರ ಸೂರು ಕಲ್ಪಿಸಿಕೊಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.  ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ 3 ರಿಂದ 5 ಲಕ್ಷ ರೂ.ಗಳ ವರೆಗೂ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಲಾಗಿತ್ತು. ಈಗಲೂ ಅದೇ ರೀತಿಯಾಗಿ ಸರ್ಕಾರ ಸ್ಪಂದಿಸಬೇಕು ಎಂದು ಹೇಳಿದರು.  ಮಳೆಯಿಂದ ಮೆಕ್ಕೆಜೋಳ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಅವ್ಳ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಬೇಕು. ಕೇಂದ್ರ ಸರ್ಕಾರದ ಕಡೆಗೆ ಬೆರಳು ತೋರಿಸದೆ ರಾಜ್ಯ ಸರ್ಕಾರವೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.  ಬಿಜೆಪಿ ಸರ್ಕಾರದ ಅವಧಿಯಲ್ಲಾದ ಹಗರಣಗಳ ತನಿಖೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಲಾೃಕ್‌ಮೇಲ್ ಮಾಡುತ್ತಿದ್ದಾರೆ. ತಪ್ಪು ಮಾಡಿದ್ದರೆ ತನಿಖೆಯಾಗಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.