ಜಿಲ್ಲೆ

ಕನ್ನಡಪರ ಹೋರಾಟಕ್ಕೆ ಬೆಂಬಲಿಸಿ

ರಮೇಶ ಜಹಗೀರದಾರ್

ದಾವಣಗೆರೆ: ರಾಜ್ಯದಲ್ಲಿ ಕನ್ನಡ ನಾಡು, ನುಡಿಗಾಗಿ ಹೋರಾಟ ನಡೆಸುವ ಕನ್ನಡಪರ ಸಂಘಟನೆಗಳಿಗೆ ಸಮಸ್ತ ನಾಗರಿಕರು ಬೆಂಬಲ ನೀಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಮಾಜಿ ಅಧ್ಯಕ್ಷ ಕೆ.ಎಲ್. ರಾಘವೇಂದ್ರ ಹೇಳಿದರು.  ರಾಜ್ಯದ ನೆಲ, ಜಲ, ಭಾಷೆ ಉಳಿವಿಗಾಗಿ ಕನ್ನಡಪರ ಹೋರಾಟಗಾರರು ಸೈನಿಕರಂತೆ ಕೆಲಸ ಮಾಡುತ್ತಿದ್ದು, ಕನ್ನಡ ಭಾಷೆ ಉಳಿಯಲು ಕಾರಣವಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  ಹೊರ ರಾಜ್ಯಗಳಿಂದ ವ್ಯಾಪಾರಕ್ಕಾಗಿ ಬಂದು ನೆಲೆಸಿದವರು ಕನ್ನಡ ಕಲಿಯದೇ ಇರುವುದು ನೋವಿನ ಸಂಗತಿ. ಇನ್ನಾದರೂ ಕನ್ನಡ ಭಾಷೆ ಕಲಿತು ವ್ಯವಹರಿಸಬೇಕು ಹಾಗೂ ಕನ್ನಡ ದಿನಪತ್ರಿಕೆಗಳನ್ನು ಕೊಂಡುಕೊಳ್ಳಬೇಕು ಎಂದರು.  ಎಎಪಿ ಜಿಲ್ಲಾಧ್ಯಕ್ಷ ಶಿವಕುಮಾರಪ್ಪ, ಕಾರ್ಯದರ್ಶಿ ಅಜಿತ್‌ಕುಮಾರ್, ರಾಜು ಸುದ್ದಿಗೋಷ್ಠಿಯಲ್ಲಿದ್ದರು.