ಜಿಲ್ಲೆ

ಬೇಡಿಕೆಗಳ ಈಡೇರಿಕೆಗೆ ಸಂಸದರಿಗೆ ಮನವಿ

ರಮೇಶ ಜಹಗೀರದಾರ್

ಹರಿಹರ : ಕರುನಾಡ ಕದಂಬ ರಕ್ಷಣಾ ವೇದಿಕೆ ಕಾರ್ಯಕರ್ತರು ಆಶ್ರಯ ಮನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು.  ನಗರಸಭಾ ಕಚೇರಿಯಲ್ಲಿ ಸೋಮವಾರ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಉಪ ಶಾಖೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಎಚ್.ಸುಧಾಕರ್ ಸಂಸದರಿಗೆ ಮನವಿ ಸಲ್ಲಿಸಿದರು.  ನಂತರ ಮಾತನಾಡಿದ ಅವರು, ಹಲವು ವರ್ಷಗಳಿಂದ ನಗರದ ಬಡವರಿಗೆ ಆಶ್ರಯ ಮನೆ ನೀಡಿಲ್ಲ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಆಶ್ರಯ ಮನೆ ನಿರ್ಮಿಸಿ ಕೊಡಬೇಕು ಎಂದರು.  ಹರಿಹರ ನಗರಸಭೆಯಲ್ಲಿ ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇರುವ ಕಾರಣ ನಗರದ ಸ್ವಚ್ಛತೆಗೆ ತೊಂದರೆ ಆಗುತ್ತಿರುವ ಕಾರಣ  ನೂರು ಪೌರಕಾರ್ಮಿಕರನ್ನು ನೇಮಿಸಬೇಕು ಎಂದು ಹೇಳಿದರು.  ಕನ್ನಡ ಭವನ ನಿರ್ಮಾಣ, ಟ್ರಾಫಿಕ್ ಪೊಲೀಸ್ ಠಾಣೆ ಸ್ಥಾಪನೆ ಮಾಡಬೇಕು. ಆಂಗ್ಲ ನಾಮಫಲಕ ತೆರವಿಗೆ ತಾಲೂಕು ವ್ಯಾಪ್ತಿಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಪತ್ರಕರ್ತರಿಗೆ ಆಶ್ರಯ ಯೋಜನೆಯಡಿ ಮನೆ ನೀಡಬೇಕೆಂದು ಕೋರಿದರು. ಈ ವೇಳೆ ವೇದಿಕೆಯ ಪದಾಧಿಕಾರಿಗಳು ಇದ್ದರು.