ದಾವಣಗೆರೆ: ಉತ್ತರ ಪ್ರದೇಶದ ಹಾಥರಸ್ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಅಲ್ಲಿಂದ ಉಪ ವಿಭಾಗಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಮನವಿ ಸಲ್ಲಿಸಿದರು.
ಈ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದಾಗಿದೆ. ಪ್ರಕರಣವನ್ನು ಅಲ್ಲಿನ ಸರ್ಕಾರ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದು, ಇದಕ್ಕೆ ಅವಕಾಶ ನೀಡಬಾರದು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರಕರಣದ ಗಂಭೀರತೆಯನ್ನು ಅರ್ಥ ಮಾಡಿಕೊಂಡು, ಕಠಿಣ ಕ್ರಮಕ್ಕೆ ಮುಂದಾಗಲಿ ಎಂದು ಒತ್ತಾಯಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ಜಮ್ನಳ್ಳಿ ನಾಗರಾಜ, ತಾಲೂಕು ಅಧ್ಯಕ್ಷ ಸೈಯದ್ ನಜೀರ್, ಆದಾಪುರ ನಾಗರಾಜ, ನಜೀರ್, ಬೀರಪ್ಪ, ಸಲೀಂ ಭಾಯಿ, ರವಿನಾಯ್ಕ, ಇಬ್ರಾಹಿಂ, ಸಲ್ಮಾ ಬಾನು, ಬಿ.ಪೂಜಾ, ಡಿ.ಜೆ. ಶೃತಿ, ಹನುಮಂತಪ್ಪ ಕುಳೇನೂರು, ಸರೋಜಮ್ಮ, ಕರಿಯಮ್ಮ, ರೇಣುಕಮ್ಮ, ಹಾಲಪ್ಪ, ಬಿ.ಆಶಾ, ಸಾವಿತ್ರಮ್ಮ ಪ್ರತಿಭಟನೆಯಲ್ಲಿದ್ದರು.