ದಾವಣಗೆರೆ : ಪ್ರತಿಪಕ್ಷದವರು ಬೇರೆ ವಿಷಯಗಳು ಇಲ್ಲದ ಕಾರಣ ಆರೋಪಗಳನ್ನು ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ವಿರುದ್ಧ ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರಶ್ನಿಸಿದಾಗ, ಅಂಥದೇನೂ ಇಲ್ಲ. ಹೈಕಮಾಂಡ್‌ನವರು ರಾಜ್ಯದ ಕೆಲವು ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಸಿಎಂ, ಡಿಸಿಎಂ ಅವರನ್ನು ದೆಹಲಿಗೆ ಕರೆದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಅಲ್ಲ ಎಂದರು. ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಧ್ಯಮಗಳ ಸೃಷ್ಟಿ ಎಂದು ಪ್ರತಿಕ್ರಿಯೆ ನೀಡಿದರು.