ಜಿಲ್ಲೆ

ಜನರ ಕುಂದುಕೊರತೆ ಆಲಿಸಿದ ಸಚಿವ

ರಮೇಶ ಜಹಗೀರದಾರ್

ದಾವಣಗೆರೆ :  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಬುಧವಾರ ತಮ್ಮ ಗೃಹ ಕಚೇರಿಗೆ ಆಗಮಿಸಿದ ಸಾರ್ವಜನಿಕರ ಕುಂದುಕೊರತೆ ಆಲಿಸಿ ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳು, ಉತ್ತರ ಹಾಗೂ ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಭಾಗದ  ಕುಂದು ಕೊರತೆಗಳನ್ನು ಆಲಿಸಿದರು. ಸಮಸ್ಯೆ ಸ್ಥಳಗಳಿಗೆ ಪಕ್ಷದ ಮುಖಂಡರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಹರಿಸುವಂತೆ ತಿಳಿಸಿದರು.  ಗೃಹ ಕಚೇರಿಗೆ ಸಮಸ್ಯೆಗಳನ್ನು ಹೊತ್ತು ಬಂದ ಅನ್ನದಾತರ ಅಳಲನ್ನು ಸಚಿವರು ಆಲಿಸಿ ಜಿಲ್ಲೆಯಲ್ಲಿನ ಕೃಷಿ ಚಟುವಟಿಕೆಗಳ ಮಾಹಿತಿ ಪಡೆದರು.  ವಿವಿಧ ಸಂಘ ಸಂಸ್ಥೆಯವರು ತಮ್ಮ ಕಾರ್ಯಕ್ರಮಗಳಿಗೆ ಸಚಿವರನ್ನು ಆಹ್ವಾನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ವಿಭಾಗಗಳ ಮುಖಂಡರು, ಕಾರ್ಯಕರ್ತರು ಇದ್ದರು.