ದಾವಣಗೆರೆ : ಬಿಜೆಪಿಯಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಹೊಸದೇನಲ್ಲ. ಈ ಹಿಂದೆಯೂ ಅವರು ಮಾಡಿದ್ದರು. ಈಗ 40 ಶಾಸಕರನ್ನು ಸೆಳೆಯಲು ಹೊರಟಿದ್ದು ಅದು ಅಷ್ಟು ಸುಲಭವಲ್ಲ. ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್‌ನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಕೆಲವರು ಶಾಸಕರು ತಮ್ಮ ನಾಯಕರ ಪರವಾಗಿ ಹೇಳಿಕೆ ನೀಡುವುದು ಸಹಜ, ಎಲ್ಲವನ್ನೂ ವರಿಷ್ಠರು ನಿರ್ಧಾರ ಮಾಡುತ್ತಾರೆ. ಪಕ್ಷದಲ್ಲಿ ಯಾವುದೇ ಬಣಗಳಿಲ್ಲ ಎಂದು ಹೇಳಿದರು.
...