ಜಿಲ್ಲೆ

ಛಾಯಾಗ್ರಾಹಕರಿಗೆ ಪ್ರಶಸ್ತಿ ಪ್ರದಾನ

ರಮೇಶ ಜಹಗೀರದಾರ್

ದಾವಣಗೆರೆ : ಕರ್ನಾಟಕ ಛಾಯಾಗ್ರಾಹಕರ ಸಂಘದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಡಿಜಿ ಇಮೇಜ್ ದಶಮಾನೋತ್ಸವ ಕಾರ್ಯಕ್ರಮದಲ್ಲಿ ದಾವಣಗೆರೆ ಫೋಟೋಗ್ರಾಫರ್ ಮತ್ತು ವಿಡಿಯೋಗ್ರಾಫರ್ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ್ ಜಾಧವ್ ಅವರಿಗೆ ಛಾಯಾ ಸಾಧಕ  ಹಾಗೂ ಫೋಟೋಗ್ರಾಫರ್ ಯೂಥ್ ವೆಲ್ಫೇರ್ ಅಸೋಸಿಯೇಷನ್ ಕಾರ್ಯದರ್ಶಿ ಅರುಣ್‌ಕುಮಾರ್ ಬಿ. ಪಾಟೀಲ್ ಅವರಿಗೆ ಛಾಯಾ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಕೆಪಿಎ ಅಧ್ಯಕ್ಷ ನಾಗೇಶ್ ಪ್ರಶಸ್ತಿ ಪ್ರದಾನ ಮಾಡಿದರು. ದಾವಣಗೆರೆ ಜಿಲ್ಲಾ ಛಾಯಾಗ್ರಾಹಕರ ಸಂಘದ ಕಾರ್ಯದರ್ಶಿ ರಾಜು, ತಾಲೂಕು ಫೋಟೋಗ್ರಾಫರ್ ಯೂಥ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಾಥ್ ಅಗಡಿ ಹಾಗೂ ದಾವಣಗೆರೆ ಛಾಯಾಗ್ರಾಹಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಆರ್.ತಿಪ್ಪೇಸ್ವಾಮಿ ಇತರರು ಇದ್ದರು