ಜಿಲ್ಲೆ

ರಸ್ತೆ ಅಪಘಾತದಲ್ಲಿ ಹೆಡ್ ಕಾನ್‌ಸ್ಟೇಬಲ್ ಸಾವು

ರಮೇಶ ಜಹಗೀರದಾರ್

ದಾವಣಗೆರೆ : ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಫ್ಲೈಓವರ್‌ನಲ್ಲಿ ಗುರುವಾರ ಸಂಜೆ ಟ್ರಾೃಕ್ಟರ್ ಡಿಕ್ಕಿಯಾಗಿ, ಬೈಕ್‌ನಲ್ಲಿ ತೆರಳುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಮೃತಪಟ್ಟಿದ್ದಾರೆ.  ಎ. ಗುರುಮೂರ್ತಿ (49) ಮೃತರು. ಅವರು ಎಸ್ಪಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುವಾಗ ಈ ಘಟನೆ ನಡೆದಿದೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.  ಗುರುಮೂರ್ತಿ ಅವರು ವಿಜಯನಗರ ಜಿಲ್ಲೆ ಇಟಗಿ ಗ್ರಾಮದವರು. ಇಲ್ಲಿನ ವಿದ್ಯಾನಗರದಲ್ಲಿ ವಾಸವಾಗಿದ್ದರು. ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿದ್ದರು.