ಜಿಲ್ಲೆ

ಉಕ್ಕಡಗಾತ್ರಿ-ಫತ್ತೇಪುರ ರಸ್ತೆ ಸಂಪರ್ಕ ಕಡಿತ

ರಮೇಶ ಜಹಗೀರದಾರ್

ದಾವಣಗೆರೆ : ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಮೂಲಕ ಹಾದು ಹೋಗುವ ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
 ಹರಿಹರ ತಾಲೂಕು ಉಕ್ಕಡಗಾತ್ರಿ-ಫತ್ತೇಪುರ ರಸ್ತೆಯ ಸಂಪರ್ಕ ಸೋಮವಾರ ಕಡಿತಗೊಂಡಿದೆ. ಉಕ್ಕಡಗಾತ್ರಿ ದೇವಸ್ಥಾನದ ಬಳಿಯ ಸ್ನಾನಘಟ್ಟಗಳು ಮುಳುಗಿದ್ದು ಜನರು ಆ ಕಡೆ ಹೋಗದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ.
 ತುಂಗಭದ್ರಾ ನದಿಯಲ್ಲಿ ಭಾನುವಾರ 7.800 ಮೀಟರ್ ಇದ್ದ ನೀರಿನ ಮಟ್ಟ ಸೋಮವಾರ 9.300 ಮೀಟರ್‌ಗೆ ಏರಿಕೆ ಕಂಡಿದೆ (ಅಪಾಯದ ಮಟ್ಟ 12 ಮೀಟರ್). ಅಗತ್ಯವಾದರೆ ಕಾಳಜಿ ಕೇಂದ್ರ ತೆರೆಯಲು ತಾಲೂಕು ಆಡಳಿತದವರು ಸಿದ್ಧತೆ ಮಾಡಿಕೊಂಡಿದ್ದಾರೆ.
 ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.