ಜಿಲ್ಲೆ

ರಾಜ್ಯದಲ್ಲಿದೆ ಹಿಂದು ವಿರೋಧಿ ಸರ್ಕಾರ

ರಮೇಶ ಜಹಗೀರದಾರ್

ದಾವಣಗೆರೆ : ರಾಜ್ಯದಲ್ಲಿ ಹಿಂದು ವಿರೋಧಿ ಸರ್ಕಾರ ಇದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.  ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಮತ್ತು ಗಲಭೆ ನಡೆದ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.  ಹಿಂದುಗಳ ಮೇಲೆ ಮನ ಬಂದಂತೆ ಪ್ರಕರಣ ದಾಖಲಿಸಿ ಬಂಧಿಸಲಾಗುತ್ತಿದೆ. ಹಿಂದುಗಳು ಕೈಗೆ ಬಳೆ ತೊಟ್ಟುಕೊಂಡಿಲ್ಲ. ಸಂದರ್ಭ ಬಂದರೆ ತಲ್ವಾರ್, ಮಚ್ಚು ಬಳಸುವುದೂ ನಮಗೆ ಗೊತ್ತು. ಬೇರೆ ದೇಶದ ಧ್ವಜ ಹಾರಿಸಿದವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ತಿಳಿಸಿದರು.  ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ. ನಾಗಮಂಗಲದಲ್ಲಿ ವ್ಯವಸ್ಥಿತವಾಗಿ ಹಿಂದು ವಿರೋಧಿಗಳು ಪೆಟ್ರೋಲ್ ಬಾಂಬ್ ಸಿಡಿಸಿದರು. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲಾಗುತ್ತಿದೆ. ಅಸಮರ್ಥ ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.  ದಾವಣಗೆರೆಯಲ್ಲಿ ಅಧಿಕಾರಿಗಳು ಸರ್ಕಾರದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಘಟನೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ಅಭಿಪ್ರಾಯಪಟ್ಟರು.