ಜಿಲ್ಲೆ

ಚಂದ್ರಯಾನದ ಅನುಭವ ಹಂಚಿಕೊಂಡ ವಿಜ್ಞಾನಿ

ರಮೇಶ ಜಹಗೀರದಾರ್

ದಾವಣಗೆರೆ : ನಗರದ ಜೈನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ನಡೆದ 2023-24ರ ಮೊದಲ ವರ್ಷದ ಬಿ.ಇ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮದಲ್ಲಿ ಇಸ್ರೋ ಹಿರಿಯ ವಿಜ್ಞಾನಿ ಗೋವಿಂದರಾಜ್, ಚಂದ್ರಯಾನ-3ರ ಉಡಾವಣೆಯ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
 ಇದೇ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರಿಂದ ವಿಜ್ಞಾನಿ ಗೋವಿಂದರಾಜ್ ಅವರನ್ನು ಗೌರವಿಸಲಾಯಿತು.
 ಕಾಲೇಜಿನ ಪ್ರಾಚಾರ್ಯ ಡಾ. ಗಣೇಶ್ ಡಿ.ಬಿ, ಜೈನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಸಲಹೆಗಾರ ಡಾ. ಮಂಜಪ್ಪ ಸಾರಥಿ, ಪ್ರೊ. ಮಧು, ಪ್ರೊ. ನಟರಾಜ್ ಜೆ. ಇದ್ದರು.