ಜಿಲ್ಲೆ

ಜಾತಿಗಣತಿಗೆ ಶಾಮನೂರು ವಿರೋಧ

ರಮೇಶ ಜಹಗೀರದಾರ್

ದಾವಣಗೆರೆ : ಜಾತಿಗಣತಿಯನ್ನು ಅಖಿಲ ಭಾರತ ವೀರಶೈವ ಮಹಾಸಭಾದಿಂದ ವಿರೋಧಿಸಿದ್ದೇವೆ, ಈಗಲೂ ಆ ನಿಲುವಿಗೆ ಬದ್ಧ ಎಂದು ಮಹಾಸಭಾ ಅಧ್ಯಕ್ಷ, ಕಾಂಗ್ರೆಸ್‌ನ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು.  ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿಗಣತಿಗೆ ಒಕ್ಕಲಿಗ ಸಮಾಜದವರೂ ವಿರೋಧ ಮಾಡಿದ್ದಾರೆ. ಇಷ್ಟಾಗಿಯೂ ಸರ್ಕಾರ ಅದನ್ನು ಜಾರಿಗೊಳಿಸಿದರೆ ಮುಂದೆ ನೋಡೋಣ ಎಂದು ತಿಳಿಸಿದರು.  ‘ಸರ್ಕಾರ ಬಿದ್ದರೆ ಬೀಳಲಿ, ಜಾತಿಗಣತಿ ಜಾರಿಯಾಗಲಿ’ ಎಂದು ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ‘ಅವರು ಏನೇ ಹೇಳಿರಬಹುದು, ನಮ್ಮ ಅಭಿಪ್ರಾಯ ನಾನು ಹೇಳಿದ್ದೇನೆ’ ಎಂದರು.