ಜಿಲ್ಲೆ

ದೇಶಕ್ಕೇ ದಿಕ್ಸೂಚಿಯಾದ ಕರ್ನಾಟಕ

ರಮೇಶ ಜಹಗೀರದಾರ್

ದಾವಣಗೆರೆ : ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿರುವ ಕರ್ನಾಟಕ ಇಡೀ ದೇಶಕ್ಕೇ ದಿಕ್ಸೂಚಿಯಾಗಿದೆ ಎಂದು ದಾವಣಗೆರೆ ದಕ್ಷಿಣ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.
 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮುದಹದಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜರೀಕಟ್ಟೆ ಗ್ರಾಮದಲ್ಲಿ ಬುಧವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
 ಚುನಾವಣೆಗೆ ಮುಂಚೆ ಕಾಂಗ್ರೆಸ್ 5 ಗ್ಯಾರಂಟಿ ಘೋಷಿಸಿತ್ತು. ಈಗ ಅದನ್ನು ಈಡೇರಿಸಿದೆ. ಗ್ಯಾರಂಟಿ ಘೋಷಣೆ ವೇಳೆ ಕೇಂದ್ರ ಸರ್ಕಾರ ಟೀಕೆ ಮಾಡಿತ್ತು. ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ಮಾಡಿಲ್ಲ. ಇಡೀ ಭಾರತದಲ್ಲಿ ಒಪ್ಪುವಂತಹ ಗ್ಯಾರಂಟಿಗಳಿವು ಎಂದರು.
 ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಸಿ.ನಿಂಗಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‌್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮುದಹದಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂಜಾ, ಉಪಾಧ್ಯಕ್ಷೆ ಮಂಜಮ್ಮ, ಸದಸ್ಯರಾದ ಶಶಿಕಲಾ, ಬಸಮ್ಮ, ಮಂಜಮ್ಮ, ನೀಲಮ್ಮ, ಸಾಕಮ್ಮ, ಜಯಮ್ಮ, ನೇತ್ರಾವತಿ, ಪಾರ್ವತಮ್ಮ, ರೇಷ್ಮಾ, ಮೌನೇಶ್ವರಚಾರಿ, ಆನಂದಪ್ಪ, ಕೃಷ್ಣಮೂರ್ತಿ ಇದ್ದರು.
 ಪಂಚಾಯತ್‌ರಾಜ್ ಇಲಾಖೆಯ ಕಾರ‌್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ, ಮಲ್ಲಾನಾಯ್ಕ, ತಾಲೂಕು ಪಂಚಾಯತ್ ಕಾರ‌್ಯ ನಿರ್ವಹಣಾಧಿಕಾರಿ ರಾಮಭೋವಿ ಪಾಲ್ಗೊಂಡಿದ್ದರು.