ಜಿಲ್ಲೆ

ಆನ್‌ಲೈನ್ ಗೇಮ್‌ಗೆ ಯುವಕ ಬಲಿ

ರಮೇಶ ಜಹಗೀರದಾರ್

ದಾವಣಗೆರೆ :  ಆನ್‌ಲೈನ್ ಗೇಮ್‌ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡಿದ್ದ ನಗರದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಇಲ್ಲಿನ ಸರಸ್ವತಿ ನಗರದ ಶಶಿಕುಮಾರ್ (25) ಮೃತ ಯುವಕ. ಆನ್‌ಲೈನ್ ಗೇಮ್‌ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ಮಾನಸಿಕವಾಗಿ ನೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.  ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆಗ ಮನೆಯಲ್ಲಿ ಯಾರೂ ಇರಲಿಲ್ಲ. ಕುಟುಂಬದ ಸದಸ್ಯರು ರಾತ್ರಿ ಮನೆಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ. ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಶಶಿಕುಮಾರ್ ಸಾಯುವ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಆನ್‌ಲೈನ್ ಗೇಮ್‌ನಿಂದ ತಾನು ಅನುಭವಿಸಿದ ತೊಂದರೆಗಳ ಬಗ್ಗೆ ಅದರಲ್ಲಿ ವಿವರಿಸಿದ್ದಾನೆ. ಆನ್‌ಲೈನ್ ಗೇಮ್ ನಿಷೇಧಿಸುವಂತೆ ಆಗ್ರಹಿಸಿದ್ದಾನೆ.