ಜಿಲ್ಲೆ

ಶಾಸಕ ಶಾಮನೂರು ಭೇಟಿಯಾದ ಮಠಾಧೀಶರು

ರಮೇಶ ಜಹಗೀರದಾರ್

ದಾವಣಗೆರೆ : ಬೆಂಗಳೂರಿನಲ್ಲಿ ಗುರುವಾರ, ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಮಾಚಿದೇವ ಗುರುಪೀಠದ ಶ್ರೀ ಬಸವ ಮಾಚಿದೇವ ಶ್ರೀಗಳು ಹಾಗೂ ವಿವಿಧ ಸ್ವಾಮೀಜಿಗಳು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟೀಯ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವದಿಸಿದರು.  ಇದೇ ವೇಳೆ ಶ್ರೀಗಳು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಆಶೀರ್ವದಿಸಿ ಸನ್ಮಾನಿಸಿದರು. ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಉದ್ಯಮಗಳಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಪಾಲಿಕೆ ಸದಸ್ಯರು, ಕಾಂಗ್ರೆಸ್ ಮುಖಂಡರು ಇದ್ದರು.