ಜಿಲ್ಲೆ

ಕೇಂದ್ರೀಯ ಪಠ್ಯಪುಸ್ತಕ ರಚನಾ ಸಮಿತಿಗೆ ಶಿಶುಪಾಲ ಆಯ್ಕೆ

ರಮೇಶ ಜಹಗೀರದಾರ್

ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾಲಯದ ಸೂಕ್ಷ್ಮಜೀವಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಅಧ್ಯಕ್ಷ ಡಾ. ಎಸ್. ಶಿಶುಪಾಲ ಅವರನ್ನು ಕೇಂದ್ರೀಯ ಪಠ್ಯಪುಸ್ತಕ ರಚನಾ ಸಮಿತಿಯ ಜೀವಶಾಸ್ತ್ರ ವಿಷಯ ತಜ್ಞರಾಗಿ ಆಯ್ಕೆ ಮಾಡಲಾಗಿದೆ.  ಈ ಸಮಿತಿಯು ರಾಷ್ಟ್ರೀಯ ಶಿಕ್ಷಣ ನೀತಿಯ ಅನುಸಾರ ದೇಶದಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ಬರುವ ಪಠ್ಯಕ್ರಮ ಮತ್ತು ಪಠ್ಯಪುಸ್ತಕ ರಚಿಸುವ ಗುರುತರ ಜವಾಬ್ದಾರಿಯನ್ನು ನಿರ್ವಹಿಸುತ್ತದೆ.  ಈ ಸಂಬಂಧ ರಾಷ್ಟ್ರೀಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಅಧಿಸೂಚನೆ ಹೊರಡಿಸಿದೆ. ಈ ಮೊದಲು ಇವರು ರಾಜ್ಯದ ಶಾಲಾ ವಿಜ್ಞಾನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು.