ದಾವಣಗೆರೆ: ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ಹಾಗೂ ದಿಗ್ವಿಜಯ 24*7 ವತಿಯಿಂದ, ಲಯನ್ಸ್ ಕ್ಲಬ್ ದಾವಣಗೆರೆ ಸಹಕಾರದೊಂದಿಗೆ ಸ್ವಾತಂತ್ರೃದ ಅಮೃತ ಮಹೋತ್ಸವ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ನಗರದ ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆ.10ರ ಬುಧವಾರ ಬೆಳಗ್ಗೆ 11ರಿಂದ 12 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ.
‘ಸ್ವಾತಂತ್ರೃದ ಶತಮಾನೋತ್ಸವದ ವೇಳೆಗೆ ಭಾರತ ಸಾಧಿಸಬೇಕಿರುವುದೇನು? ಇದರಲ್ಲಿ ಯುವಜನರ ಪಾತ್ರ ಏನು? (ಟಾರ್ಗೆಟ್ 2047)’ ಎಂಬುದು ಸ್ಪರ್ಧೆಯ ವಿಷಯವಾಗಿದೆ. ವಿಜೇತರಿಗೆ ಪ್ರಥಮ ಬಹುಮಾನ 5 ಸಾವಿರ ರೂ., ದ್ವಿತೀಯ 3 ಸಾವಿರ ರೂ., ತೃತೀಯ ಬಹುಮಾನ 2 ಸಾವಿರ ರೂ. ನೀಡಲಾಗುವುದು.
9148713856 ಅಥವಾ 9738226802 ಸಂಪರ್ಕಿಸಬಹುದು. ಸ್ಥಳದಲ್ಲೂ ನೋಂದಣಿ ಮಾಡಿಕೊಳ್ಳಬಹುದು.